ಗದಗ, ನವೆಂಬರ್ 04: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಧಕ್ಷತೆಯಲ್ಲಿ ನಡೆದ ಎಐಸಿಸಿ ಸಭೆಗೆ 100 ವರ್ಷ ಆಗಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.
ವಿಧಾನಮಂಡಲ ಜಂಟಿ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಆಹ್ವಾನಿಸಲಾಗಿದೆ.
ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಾಕ ಒಬಮಾ ಅವರಿಗೆ ಪತ್ರ ಬರೆದು ಆಮಂತ್ರಣ ನೀಡಿದ್ದಾರೆ ಎಂದು ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ತಿಳಿಸಿದರು.