ಎಮ್ ಕೆ. ಹುಬ್ಬಳ್ಳಿ: ಇಲ್ಲಿಗೆ ಸಮೀಪದ ವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ ಹೊಳಿಹೊಸೂರ ಇದರ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ಮಾಜಿ ಶಾಸಕ ಹಾಗೂ ಬಿ ಡಿ ಸಿ ಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಅವಿರೋಧ ಆಯ್ಕೆಯಾದರು.
ಅವಿರೋಧವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರನ್ನು ಸನ್ಮಾನಿಸಿ ಮಹಾಂತೇಶ ದೊಡ್ಡಗೌಡರ ಮಾತನಾಡಿ ಈ ಹೊಳಿಹೊಸೂರ ಗ್ರಾಮದ ಗ್ರಾಮೀಣ ಕೃಷಿ ಪತ್ತಿನ ಸಂಘದ ಬೆಳವಣಿಗೆಗೆ ಈ ಭಾಗದ ರೈತರ ಅಭಿವೃದ್ಧಿಗೆ ಆಡಳಿತ ಮಂಡಳಿ ಸದಸ್ಯರ ಸಹಕಾರದಿಂದ ಅಭಿವೃದ್ಧಿಪಡಿಸಲಾಗುವದೆಂದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ರೈತ ಮುಖಂಡರು, ನೂತನ ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.