ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Ravi Talawar
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಪಾದಯಾತ್ರೆ ನಡೆಸಲು ನಿರ್ಧರಿಸಿವೆ.

ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ನಮ್ಮ‌ ಪಾದಯಾತ್ರೆಗೂ ಅವರು ಅನುಮತಿ ಕೊಟ್ಟಿರಲಿಲ್ಲ. ಆದರೂ ನಾವೂ ಮಾಡಿದೆವು, ಹಾಗೇ ಅವರೂ ಮಾಡಲಿ. ಆದರೆ ಸರ್ಕಾರದ ಅನುಮತಿ ಇರಲ್ಲ. ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ. ಅವರು ಪಾದಯಾತ್ರೆ ಮಾಡಿದರೆ ಮಾಡಲಿ. ಆದರೆ ಅಧಿಕೃತವಾಗಿ ಅದಕ್ಕೆ ನಮ್ಮ ಪೊಲೀಸ್ ಇಲಾಖೆ ಅನುಮತಿ ಕೊಡಲ್ಲ. ಪಾದಯಾತ್ರೆಗೆ ತಡೆ ಹಾಕಲ್ಲ. ಅನುಮತಿ ಕೊಟ್ಟರೆ ಕಾನೂನು ಸಮಸ್ಯೆಗಳಾಗಲಿವೆ. ಆದರೆ ಅವರು ಜನರಿಗೆ ತೊಂದರೆ ಕೊಡದೇ ಪಾದಯಾತ್ರೆ ನಡೆಸಲಿ. ಪಾದಯಾತ್ರೆಗೆ ಏನು ವ್ಯವಸ್ಥೆ ಬೇಕೋ ಮಾಡಿಕೊಡ್ತೇವೆ ಎಂದರು.

ರಾಜ್ಯಕ್ಕೆ ಅನುದಾನ ಅನ್ಯಾಯವಾಗಿಲ್ಲ ಎಂಬ ಸಚಿವೆ ನಿರ್ಮಲಾ ಸೀತರಾಮನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಯುಪಿಎ ಎನ್‌ಡಿಎ ಅವಧಿ ಅನ್ನೋ ಹೋಲಿಕೆಯ ಪ್ರಶ್ನೆ ಅಲ್ಲ. ಅಂದಿನ ಬಜೆಟ್ ಎಷ್ಟಿತ್ತು, ಈಗ ಎಷ್ಟಾಗಿದೆ ಅನ್ನೋದನ್ನು ನೋಡಬೇಕು. ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡೋದು ಬೇಡ ಅನ್ನಲ್ಲ, ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ಸುಪ್ರೀಂ ಕೋರ್ಟ್​ವರೆಗೆ ತಲುಪಿದ್ದೇವೆ. ಕೊಟ್ಟಿದೀವಿ ಕೊಟ್ಟಿದೀವಿ ಅಂತಾರೆ, ಏನು ಕೊಟ್ಟಿದ್ದಾರೆ ಅಂತ ಹೇಳಬೇಕಲ್ವಾ?. ಭದ್ರಾಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ಧೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದಿವಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.

WhatsApp Group Join Now
Telegram Group Join Now
Share This Article