ಇಂದಿನಿಂದ 3 ಹೊಸ ಅಪರಾಧ ಕಾನೂನು ಜಾರಿ, ಪ್ರಮುಖ ಬದಲಾವಣೆ : ಗೃಹಸಚಿವ ಡಾ.ಪರಮೇಶ್ವರ್​

Ravi Talawar
ಇಂದಿನಿಂದ 3 ಹೊಸ ಅಪರಾಧ ಕಾನೂನು ಜಾರಿ, ಪ್ರಮುಖ ಬದಲಾವಣೆ : ಗೃಹಸಚಿವ ಡಾ.ಪರಮೇಶ್ವರ್​
WhatsApp Group Join Now
Telegram Group Join Now

ಬೆಂಗಳೂರು, ಜುಲೈ.01: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ. ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ.

ಕಾನ್ಸ್‌ಟೇಬಲ್​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದರು.

 

WhatsApp Group Join Now
Telegram Group Join Now
Share This Article