ನವದೆಹಲಿ, ಮಾರ್ಚ್ 24: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪಿಂಗ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿದೆ. ಹಾಗೆಯೇ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ವಿಚಾರಣೆ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿತ್ತು. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ 48 ನಾಯಕರು ಇದೇ ರೀತಿಯ ಟ್ರ್ಯಾಪ್ಗೆ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದರು.