ಮಾನವ-ಆನೆ ಸಂಘರ್ಷವು ಒಂದು ಸಂಕೀರ್ಣ ಸಮಸ್ಯೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

Ravi Talawar
ಮಾನವ-ಆನೆ ಸಂಘರ್ಷವು  ಒಂದು ಸಂಕೀರ್ಣ ಸಮಸ್ಯೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ
WhatsApp Group Join Now
Telegram Group Join Now

ಬೆಂಗಳೂರು: “ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅರಣ್ಯ ಇಲಾಖೆಯು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಈ ಸಮ್ಮೇಳನದ ವಿಷಯವೇ ಒಂದು ಮಹತ್ವದ ಸವಾಲನ್ನು ಪ್ರಚುರಪಡಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

“ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ. ಕರ್ನಾಟಕ ರಾಜ್ಯ ವೈವಿಧ್ಯಮಯ ಜೀವವೈವಿಧ್ಯ, ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿನಿಂದ ಕೂಡಿದೆ. ವಿಶಾಲವಾದ ದಟ್ಟ ಅಡವಿಗಳು, ಪ್ರಾಣಿ ಸಂಕುಲ, ಸಸ್ಯ ಸಂಕುಲ, ಕೀಟ ಸಂಕುಲ ಮತ್ತು ಪಕ್ಷಿ ಸಂಕುಲಕ್ಕೆ ನೆಲೆಯಾಗಿದೆ. ಕರ್ನಾಟಕದಲ್ಲಿ ಸುಮಾರು 43,382 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಅಂದರೆ ನಮ್ಮ ಭೌಗೋಳಿಕ ಭೂಭಾಗದ ಶೇ.22ರಷ್ಟು ಹಸಿರು ಹೊದಿಕೆ ಇದೆ” ಎಂದು ಮಾಹಿತಿ ನೀಡಿದರು.

WhatsApp Group Join Now
Telegram Group Join Now
Share This Article