ನವದೆಹಲಿ: ಗಡಿಯಾಚೆಯಿಂದ ಎದುರಾಗುವ ಭಯೋತ್ಪಾದನೆ ವಿರುದ್ಧ ಪ್ರತಿದಾಳಿ ನಡೆಸಲು ಭಾರತ ಹಿಂಜರಿಯುವುದಿಲ್ಲ. ಭಾರತದ ಮೇಲೆ ದಾಳಿ ಮಾಡುವವರನ್ನು ‘ಅವರು ಪಾಕಿಸ್ತಾನ ಸೇರಿದಂತೆ ಎಲ್ಲೇ ಇದ್ದರೂ’ ಭೇಟೆಯಾಡಲಾಗುವುದು ಎಂದು ವಿದೇಶಾಂಗ ಸಚಿವ (ಇಎಎಂ) ಎಸ್ ಜೈಶಂಕರ್ ಮಂಗಳವಾರ ಎಚ್ಚರಿಸಿದ್ದಾರೆ.
‘ಉಗ್ರರು ಭಾರತದ ಮೇಲೆ ದಾಳಿ ಮಾಡಿದರೆ, ಅವರು ಪಾಕಿಸ್ತಾನ ಸೇರಿದಂತೆ ಎಲ್ಲೇ ಅಡಗಿದ್ದರೂ ನಾವು ಅವರನ್ನು ಬೇಟೆಯಾಡುತ್ತೇವೆ. ಭಯೋತ್ಪಾದನೆ ಮುಂದುವರಿಯುವವರೆಗೆ, ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಮತ್ತು ನಮ್ಮ ಆತ್ಮರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಇದು ನಮ್ಮ ಮೂಲಭೂತ ಕರ್ತವ್ಯವಾಗಿದೆ’ ಎಂದು ಫ್ರೆಂಚ್ ದಿನಪತ್ರಿಕೆ ಲೆ ಫಿಗರೊಗೆ ಹೇಳಿದ್ದಾರೆ.