ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಮರು ತನಿಖೆಗೆ ಹೈದರಾಬಾದ್​ ಪೊಲೀಸರ ನಿರ್ಧಾರ

Ravi Talawar
ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದ ಮರು ತನಿಖೆಗೆ ಹೈದರಾಬಾದ್​ ಪೊಲೀಸರ ನಿರ್ಧಾರ
WhatsApp Group Join Now
Telegram Group Join Now

ಹೈದರಾಬಾದ್: ಎಚ್‌ಸಿಯು ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಕುರಿತಂತೆ ಪೊಲೀಸ್ ಇಲಾಖೆ ಮರು ತನಿಖೆ ನಡೆಸಲು ನಿರ್ಧರಿಸಿದೆ.

ಇತ್ತೀಚೆಗಷ್ಟೇ ಪೊಲೀಸರು ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದು, ಈ ವಿಚಾರದಲ್ಲಿ ವಿವಿ ವಿಸಿ ಹಾಗೂ ಹಲವು ಮುಖಂಡರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ರೋಹಿತ್ ಅವರ ತಾಯಿ, ವಿದ್ಯಾರ್ಥಿಗಳು ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಪ್ರಕರಣವನ್ನು ಮರು ತನಿಖೆ ಮಾಡಲು ಈ ನಿರ್ಧಾರ ಕೈಗೊಂಡಿದೆ.

ವೇಮುಲಾ ರೋಹಿತ್ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದರು. ಈ ಘಟನೆಯ ಬಗ್ಗೆ ವಿದ್ಯಾರ್ಥಿ ಸಂಘಗಳು ಮತ್ತು ಹೆಚ್​ಸಿಯು ವಿದ್ಯಾರ್ಥಿಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಕೈಗೊಂಡಿದ್ದರು. ದೇಶಾದ್ಯಂತ ಹಲವು ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸಿದ್ದವು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಬಾರಿ ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಸೈಬರಾಬಾದ್‌ನ ಗಚಿಬೌಲಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನವೆಂಬರ್ 2023 ರಲ್ಲಿ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದರು.

ತನಿಖಾಧಿಕಾರಿ ಈ ವರ್ಷ ಮಾರ್ಚ್ 21 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಇತ್ತೀಚೆಗೆ ಮತ್ತೆ ಎಲ್ಲರಲ್ಲೂ ಆತಂಕ ಶುರುವಾಗಿದೆ. ಡಿಜಿಪಿ ರವಿಗುಪ್ತ ಶುಕ್ರವಾರ ಈ ಪ್ರಕರಣದ ಮರು ತನಿಖೆಗೆ ನಿರ್ಧರಿಸಿದ್ದಾರೆ. ಇದಕ್ಕೆ ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ. ರೋಹಿತ್ ಆತ್ಮಹತ್ಯೆ ಪ್ರಕರಣದ ಮರು ತನಿಖೆ ಮುಂದುವರಿಯಲಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article