ಮೈಸೂರು: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.
ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ.
ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ


