ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಗೋಡೆಬರಹ: ಹಿಂದೂ ಧರ್ಮಕ್ಕೆ ಅವಮಾನ

Ravi Talawar
ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಗೋಡೆಬರಹ: ಹಿಂದೂ ಧರ್ಮಕ್ಕೆ ಅವಮಾನ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 15: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿದ್ದ ವಿಚಾರ ರಾಜ್ಯದಾದ್ಯಂತ ವಿವಾದಕ್ಕೀಡಾಗಿತ್ತು. ಇದೀಗ ಗ್ರಂಥಾಲಯಗಳಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿರುವ ಬಗ್ಗೆ ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ (Library), ‘ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ’ ಎಂಬ ಗೋಡೆಬರಹ ಪ್ರಕಟಿಸಲಾಗಿದೆ. ಇದೀಗ ಗೋಡೆಬರಹಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.

ಗ್ರಂಥಾಲಯದ ಪ್ರವೇಶ ದ್ವಾರದ ಗೋಡೆ ಮೇಲೆ ಬರಹ ಪ್ರಕಟಿಸಲಾಗಿದೆ. ಈ ಗ್ರಂಥಾಲಯ ರಾಜ್ಯ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದ ಗೋಡೆ ಬರಹಕ್ಕೆ ಸಾಮಾಜಿಕ ಜಾಲತಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆಗಳು ಗೋಡೆಬರಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಂದಿರದ ಬದಲಾಗಿ ಮಸೀದಿ ಎಂದು ಯಾಕೆ ಬಳಕೆ ಮಾಡಲ್ಲ ಎಂದು ಪ್ರಶ್ನಿಸಿವೆ.

 

WhatsApp Group Join Now
Telegram Group Join Now
Share This Article