ಬಿಜೆಪಿ ಮತ್ತೊಮ್ಮೆ ಗೆದ್ದರೆ ‘ಮೋದಿ ದೇಗುಲ’ ಕಟ್ಟುವ ಪರಿಸ್ಥಿತಿ ನಿರ್ಮಾಣ

Ravi Talawar
ಬಿಜೆಪಿ ಮತ್ತೊಮ್ಮೆ ಗೆದ್ದರೆ ‘ಮೋದಿ ದೇಗುಲ’ ಕಟ್ಟುವ ಪರಿಸ್ಥಿತಿ ನಿರ್ಮಾಣ
WhatsApp Group Join Now
Telegram Group Join Now

ಕೊಪ್ಪಳ, ಮೇ 25: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗೆದ್ದರೆ ತಮ್ಮ ದೇವಸ್ಥಾನ ತಾವೇ ಕಟ್ಟಿಕೊಳ್ಳುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ  ಲೇವಡಿ ಮಾಡಿದ್ದಾರೆ. ಕೊಪ್ಪಳದ ಕಾರಟಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮನ ದೇಗುಲ ಆಯ್ತು, ಇನ್ನು ನನ್ನ ದೇಗುಲ ಅಂತಾ ಕಟ್ಟಿಕೊಳ್ಳುತ್ತಾರೆ. ಯಾಕೆ ಅಂದರೆ ಮೋದಿ ಸ್ಟೇಟ್​​ಮೆಂಟ್​​ಗಳು ಹಾಗೆ ಇವೆ ಎಂದು ಹೇಳಿದ್ದಾರೆ.

ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ ಅಂತಾ ಮೋದಿ ಹೇಳುತ್ತಾರೆ. ಜನ ಮತ್ತೊಮ್ಮೆ ಅವಕಾಶ ಕೊಟ್ಟರೆ ಮೋದಿ ದೇಗುಲ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಬಹುದು. ಪ್ರತಿ ಊರಲ್ಲಿ ಪ್ರಧಾನಿ ಮೋದಿ ದೇವಸ್ಥಾನ ಕಟ್ಟಿ ಅನ್ನೋ ಸ್ಥಿತಿ ಬರುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article