ಬೆಂಗಳೂರು, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಪ್ರಜೆಗಳು ಭಾರತ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳು ನೆಲೆಸಿದ್ದರೆ ಕ್ರಮ ಕೈಗೊಳ್ಳಲಾಗುವುದು. ಸ್ಲೀಪರ್ ಸೆಲ್ಗಳ ಪತ್ತೆ ಕಾರ್ಯವೂ ನಡೆಯುತ್ತಿದೆ. ಸ್ಲೀಪರ್ ಸೆಲ್ಗಳು ಪತ್ತೆಯಾದರೆ NIAಗೆ ಮಾಹಿತಿ ನೀಡುತ್ತೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಅನಧಿಕೃತವಾಗಿ ಪಾಕಿಸ್ತಾನ ಪ್ರಜೆಗಳು ನೆಲೆಸಿದ್ದರೆ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್
