ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವೀಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವೀಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಅಮಿತ್ ಶಾ ಅವರೇ ದಂಗಾಗಿ ಹೋಗಿದ್ದಾರೆ. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಅವರ ವೀಡಿಯೋಗಳೂ ಇವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಝ್ ಮಾಡಿಸಿದರು. ಪ್ರತಾಪ್ ಸಿಂಹ ಅಶ್ಲೀಲ ವಿಡಿಯೋಗಳು ನನ್ನ ಮೊಬೈಲ್‌ನಲ್ಲೇ ಇವೆ, ಮೊಬೈಲ್‌ನಲ್ಲಿರುವ ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಬಾರದು ಎಂಬ ನಿರ್ಧಾರ ಕೈಗೊಂಡರು. ಇಂತಹ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ಇದೇ ವೇಳೆ ಸಚಿವ ಎಚ್.ಸಿ. ಮಹದೇವಪ್ಪ ಅವರ ‘ಕೆಆರ್‌ಎಸ್‌ಗೆ ಟಿಪ್ಪು ಅಡಿಗಲ್ಲು ಹಾಕಿದ್ದರು’ ಎಂಬ ಹೇಳಿಕೆಯನ್ನು ಲಕ್ಷ್ಮಣ್ ಅವರು ಸಮರ್ಥಿಸಿಕೊಂಡಿದ್ದಾರೆ.