ನವದೆಹಲಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಬೆಂಗಳೂರು ಸಂಸ್ಥೆಯ ಹಿರಿಮೆಗೆ ಮತ್ತೊಂದು ಮಹತ್ತರ ಗರಿ ದೊರೆತಿದ್ದು, ‘ದೇಶದ ಉತ್ಯುತ್ತಮ ವಿಶ್ವ ವಿದ್ಯಾಲಯ’ ಎಂಬ ಕೀರ್ತಿಗೆ ಭಾಜನವಾಗಿದೆ.
ಹೌದು.. ರಾಷ್ಟ್ರೀಯ ಸಂಸ್ಥೆ ಶ್ರೇಯಾಂಕ ಚೌಕಟ್ಟು National Institute Ranking Framework (NIRF) ಬಿಡುಗಡೆ ಮಾಡಿರುವ ದೇಶದ ಟಾಪ್ 10 ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ಐಐಟಿಗೆ ಅಗ್ರ ಸ್ಥಾನ ಲಭಿಸಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಈ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದೆಹಲಿ ಭಾರತ್ ಮಂಟಪಂ ವೇದಿಕೆಯಲ್ಲಿ ಈ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಶಿಕ್ಷಣ ರಾಜ್ಯ ಸಚಿವ ಸುಕಾಂತೋ ಮಜುಂದಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.