ಅಕ್ರಮವಾಸಿ ಬಾಂಗ್ಲಾ ಪ್ರಜೆ ಬಂಧನ

Ravi Talawar
ಅಕ್ರಮವಾಸಿ ಬಾಂಗ್ಲಾ ಪ್ರಜೆ ಬಂಧನ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್​ 12: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತ ಬಾಂಗ್ಲಾದೇಶ ಪ್ರಜೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದನು. ಪಶ್ಚಿಮ ಬಂಗಾಳದ ಮೆಲ್ಪಾ ಜಿಲ್ಲೆಯ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದನು.

ಬಳಿಕ, ಮೊಹಮ್ಮದ್ ಸಿದ್ಧಿಕ್ ಬೆಂಗಳೂರಿನ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ವಾಸವಿದ್ದನು. ಇಲ್ಲಿ, ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್​ಪೋರ್ಟ್, ವೋಟರ್​ಐಡಿ, ಪಾನ್ ಕಾರ್ಡ್ ಪಡೆದಿದ್ದಾಗಿ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಮೊಹಮ್ಮದ್ ಸಿದ್ಧಿಕ್ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಫಾರಿನರ್ಸ್ ಆಕ್ಟ್, BNS 336(3), 340(2), 339ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊಹಮ್ಮದ್ ಸಿದ್ದಿಕ್ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿರುವ ಬಾಂಗ್ಲಾ ವಲಸಿಗರಿಂದ ಹಣ ಪಡೆದುಕೊಂಡು, ಭಾರತೀಯ ದಾಖಲಾತಿಗಳಾದ ಪಾಸ್​ಪೋರ್ಟ್​, ಪ್ಯಾನ್​ಕಾರ್ಡ್​ಗಳನ್ನು ಮಾಡಿಸಿಕೊಂಡಿದ್ದಾನೆ. ಈತನ ಜೊತೆಗೆ ಇನ್ನೂ 15-20 ಬಾಂಗ್ಲಾ ವಲಸಿಗರು ಜನ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಫ್​ಐಆರ್​ನಲ್ಲಿ ದಾಖಲಾಗಿದೆ.

WhatsApp Group Join Now
Telegram Group Join Now
Share This Article