ಬೆಂಗಳೂರು, ಮಾರ್ಚ್ 11: ನಟಿ ರನ್ಯಾ ರಾವ್ (Ranya Rao) ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ (Gold Smuggling) ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ಅವರಿಗೂ ಸಂಕಷ್ಟ ಎದುರಾಗಿದೆ
. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.
ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.