ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ

Ravi Talawar
ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ
WhatsApp Group Join Now
Telegram Group Join Now

ಸಿನಿಪ್ರಿಯರಿಗೆ ಇದು ಗುಡ್ ನ್ಯೂಸ್. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್  ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್​ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.

ಏಕಪರದೆ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾಗಳ ಟಿಕೆಟ್ ಬೆಲೆ ದುಬಾರಿ ಆಗಿರುತ್ತದೆ. ಆ ಕಾರಣದಿಂದಲೇ ಜನರು ಚಿತ್ರಮಂದಿರಗಳಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಹಾಗಾಗಿ ಸಿನಿಮಾಗಳ ಟಿಕೆಟ್ ಬೆಲೆ ತಗ್ಗಿಸಬೇಕು ಎಂದು ಹೇಳಲಾಗುತ್ತಿತ್ತು. ಅದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ.

WhatsApp Group Join Now
Telegram Group Join Now
Share This Article