ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ; ಕೊಚ್ಚಿಹೋದ ಮನೆ, ರಸ್ತೆಗಳು; ಸಮರೋಪಾದಿಯಲ್ಲಿ ರಕ್ಷಣಾಕಾರ್ಯ

Ravi Talawar
ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ; ಕೊಚ್ಚಿಹೋದ ಮನೆ, ರಸ್ತೆಗಳು; ಸಮರೋಪಾದಿಯಲ್ಲಿ ರಕ್ಷಣಾಕಾರ್ಯ
WhatsApp Group Join Now
Telegram Group Join Now

ಡೆಹ್ರಾಡೂನ್, ಸೆಪ್ಟೆಂಬರ್ 16: ಡೆಹ್ರಾಡೂನ್​​ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ.ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ. ಗಂಟೆಗೆ 15 ಮಿಮೀಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆ ಮತ್ತು ಗಂಟೆಗೆ 87 ಕಿ.ಮೀ ವೇಗದಲ್ಲಿ ಬೀಸುವ ಗಾಳಿ ಬೀಸಲಿದೆ ಎಂದು ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Share This Article