ಗದಗ ಜುಲೈ 7: ಅಸುಂಡಿ ಗ್ರಾಮದಲ್ಲಿ ರವಿವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ,ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಿರ್ಮಿಸಿದ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ ಆರ್ ಪಾಟೀಲ, ಅಸುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜುದ್ದಿನ್ ಓಲೇಕಾರ, ಉಪಾಧ್ಯಕ್ಷ ಶಶೀಕಲಾ ಹೊಸಮನಿ, ಎಸ್ ಎನ್ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಸೇರಿದಂತೆ ಗ್ರಾಮದ ಗಣ್ಯರು ಹಾಜರಿದ್ದರು.