ರಾಯಬಾಗ: ತಾಲೂಕಿನ ನಸಲಾಪುರ ಗ್ರಾಮದಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 105 ನೇ ನೂತನ ಶಾಖೆಯ ಉದ್ಘಾಟನೆ ಸಮಾರಂಭ ಜು.16 ರಂದು ಬೆಳ್ಳಿಗ್ಗೆ 10.30 ಕ್ಕೆ ನಡೆಯಲಿದೆ. ಸಮಾರಂಭದ ಸಾನ್ನಿಧ್ಯವನ್ನು ಬಾವನ ಸೌಂದತ್ತಿ ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿಯವರು ವಹಿಸಲಿದ್ದಾರೆ. ಉದ್ಘಾಟಕರಾಗಿ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಚಿಕ್ಕೋಡಿ ಸಿ.ಬಿ.ಕೆ.ಎಸ್.ಎಸ್.ಕೆ ನಿರ್ದೇಶಕ ಭರತೇಶ ಬನವಣೆ ವಹಿಸಲಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ ತಾಲೂಕಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎನ್.ಜಿ.ಕಲಾವಂತ ತಿಳಿಸಿದ್ದಾರೆ.