ನವದೆಹಲಿ, ಜೂನ್ 20: ಭಾರತದಲ್ಲಿ ಬಹಳ ವೇಗವಾಗಿ ಇಂಧನ ಉತ್ಪಾದನೆ ಸಾಮರ್ಥ್ಯ ಹೆಚ್ಚಳ ಆಗುತ್ತಿದೆ. ಅಂತಾರಾಷ್ಟ್ರೀಯ ಇಂಧನ ಏಜೆನ್ಸಿ ಪ್ರಕಾರ ಕಳೆದ ಐದು ವರ್ಷದಲ್ಲಿ ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಳದಲ್ಲಿ ಜಾಗತಿಕವಾಗಿ ಭಾರತ ಮೂರನೇ ಸ್ಥಾನ ಪಡೆದಿದೆ. ಚೀನಾ ಮತ್ತು ಅಮೆರಿಕ ಈ ಅವಧಿಯಲ್ಲಿ ಅತಿಹೆಚ್ಚು ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡಿವೆ. ಇವೆರಡು ದೇಶಗಳು ಒಟ್ಟಾರೆ ಇಂಧನ ಉತ್ಪಾದನಾ ಸಾಮರ್ಥ್ಯದಲ್ಲಿ ಮೊದಲೆರಡು ಸ್ಥಾನದಲ್ಲಿವೆ. ಭಾರತ ಮೂರನೇ ಸ್ಥಾನದಲ್ಲಿದೆ. ಇಂಧನ ಸಾಮರ್ಥ್ಯ ಹೆಚ್ಚಳದಲ್ಲೂ ಭಾರತ ತನ್ನ ಸ್ಥಾನ ಉಳಿಸಿಕೊಂಡಿದೆ.
ಭಾರತದಲ್ಲಿ ಇಂಧನ ಉತ್ಪಾದನೆ ಸಾಮರ್ಥ್ಯ ಹೆಚ್ಚಳ: ಐಇಎ
