ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ!

Ravi Talawar
ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ!
WhatsApp Group Join Now
Telegram Group Join Now

 

ಬೆಂಗಳೂರು (.15): ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗಾಗಿ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ಮೂಲ ವೇತನದ ಶೇಕಡಾ 12.25 ರಷ್ಟಿದ್ದ ತುಟ್ಟಿಭತ್ಯೆಯ ದರವನ್ನು ಶೇಕಡಾ 14.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಿದೆ.

ಈ ತುಟ್ಟಿ ಭತ್ಯೆ ಹೆಚ್ಚಳವು ದಿನಾಂಕ 1ನೇ ಜುಲೈ 2025 ರಿಂದ ಜಾರಿಗೆ ಬರಲಿದೆ. ಸರ್ಕಾರದ ಆದೇಶ ಸಂಖ್ಯೆ: ಆಇ 18 ಎಸ್‌ಆರ್‌ಪಿ 2025, ದಿನಾಂಕ: 15 ನೇ ಅಕ್ಟೋಬರ್ 2025 ರಂದು ಈ ನಡವಳಿಯನ್ನು ಹೊರಡಿಸಲಾಗಿದೆ. ಈ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ಆರ್ಥಿಕ ನೆರವು ದೊರೆಯಲಿದೆ.

ಸರ್ಕಾರದ ಈ ನಿರ್ಧಾರವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸ್ವಾಗತಿಸಿದ್ದು, ನೌಕರರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಏರಿಕೆ ಮಾಡುವುದು ವಾಡಿಕೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ತನ್ನ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿತ್ತು. ಇದೇ ಮಾದರಿಯಲ್ಲಿ ರಾಜ್ಯ ನೌಕರರಿಗೂ ಶೇ. 3ರಷ್ಟು ತುಟ್ಟಿ ಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಬೇಕೆಂದು ನೌಕರರ ಸಂಘವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತ್ತು.

WhatsApp Group Join Now
Telegram Group Join Now
Share This Article