ಹೊಸಪೇಟೆ : ಮಲೆನಾಡು, ತುಂಗಭದ್ರಾ ಜಲಾನಯನ ಪ್ರದೇಶ ಜೊತೆಗೆ ವಿಜಯನಗರ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನ ಸುರಿದ ಭಾರೀ ಮಳೆಯಿಂದಾಗಿ . ಕಲ್ಯಾಣ – ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಜೀವಕಳೆ ಬಂದಿದೆ. ಬೇಸಿಗೆಯಲ್ಲಿ ಬರಿದಾಗಿ ಡೆಡ್ ಸ್ಟೋರೇಜ್ ಹಂತಕ್ಕೆ ತಲುಪಿದ್ದ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹತ್ತು ಸಾವಿರ ಕ್ಯುಸೆಕ್ ಗಿಂತಲೂ ಅಧಿಕ ಪ್ರಮಾಣ ನೀರು ಹರಿದು ಬರುತ್ತಿದ್ದು ಜಲಾಶಯದ ನೀರಿನ ಪ್ರಮಾಣ ಹೆಚ್ಚಾಗಿದೆ. ನಾಲ್ಕು ದಿನಗಳಲ್ಲಿ 6 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಜಲಾಶಯದಲ್ಲಿ ನೀರು ಖಾಲಿಯಾಗಿ, ಜಲಚರಗಳಿಗೂ ಸಮಸ್ಯೆಯಾಗಿತ್ತು. ಮುಂಗಾರು ಪೂರ್ವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ . ಜಲಾಶಯಕ್ಕೆ ಒಳಹರಿವು ಹೆಚ್ಚಿರೋ ಕಾರಣ ರೈತರ ಮೊಗದಲ್ಲಿ ಮಂದಹಾಸ ಕಂಡು ಬರುತ್ತಿದೆ.