ಲಡಾಕ್‌ ಸ್ಥಿತಿಯ ಶಾಂತತೆಗೆ ಭಾರತ – ಚೀನಾ 23ನೇ ಸುತ್ತಿನ ಮಾತುಕತೆ

Ravi Talawar
ಲಡಾಕ್‌ ಸ್ಥಿತಿಯ ಶಾಂತತೆಗೆ  ಭಾರತ – ಚೀನಾ 23ನೇ ಸುತ್ತಿನ ಮಾತುಕತೆ
WhatsApp Group Join Now
Telegram Group Join Now

ನವದೆಹಲಿ: ಪೂರ್ವ ಲಡಾಖ್‌ನಲ್ಲಿನ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಶಾಂತಿ ಮತ್ತು ಭದ್ರತೆ ಕಾಪಾಡಿಕೊಳ್ಳುವತ್ತ ಗಮನಹರಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾದ ಉನ್ನತ ಮಟ್ಟದ ಸೇನಾಧಿಕಾರಿಗಳು ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.

“ಭಾರತ – ಚೀನಾ ಕಾರ್ಪ್ಸ್ ಕಮಾಂಡರ್​​ಗಳು ಅಕ್ಟೋಬರ್ 25 ರಂದು ಚುಶುಲ್ – ಮೋಲ್ಡೊ ಗಡಿಯಲ್ಲಿ 23ನೇ ಸುತ್ತಿನ ಮಾತುಕತೆ ನಡೆಸಿದರು. ಆಗಸ್ಟ್ 19 ರಂದು ನಡೆದ ವಿಶೇಷ ಪ್ರತಿನಿಧಿಗಳ ಮಾತುಕತೆಯ ನಂತರದ ಬೈಠಕ್​​ ಇದಾಗಿದೆ ಎಂದು ಹೇಳಿದೆ.

“ಮಾತುಕತೆಗಳು ಸ್ನೇಹಪರ ಮತ್ತು ಸೌಹಾರ್ದಯುತವಾಗಿ ನಡೆದವು. 2024ರ ಅಕ್ಟೋಬರ್​ನಲ್ಲಿ ನಡೆದ 22ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯ ನಂತರದ ಪ್ರಗತಿಯನ್ನು ಎರಡೂ ಕಡೆಯವರು ಗಮನಿಸಿದರು. ಭಾರತ – ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಯ್ದುಕೊಳ್ಳಲಾಗಿದೆ ಎಂಬ ಅಭಿಪ್ರಾಯವನ್ನು ಹಂಚಿಕೊಂಡರು. ಸ್ಥಿರತೆ ಕಾಪಾಡಿಕೊಳ್ಳಲು ಗಡಿಯಲ್ಲಿ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಈಗಿರುವ ಕಾರ್ಯವಿಧಾನಗಳನ್ನು ಬಳಸುವುದನ್ನು ಮುಂದುವರಿಸಲು ಎರಡೂ ಕಡೆಯವರು ಒಪ್ಪಿಕೊಂಡರು” ಎಂದು ಎಂಇಎ ತಿಳಿಸಿದೆ.

WhatsApp Group Join Now
Telegram Group Join Now
Share This Article