ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದ ಭಾರತ

Ravi Talawar
ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದ ಭಾರತ
WhatsApp Group Join Now
Telegram Group Join Now

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ (LoC) ಕುಪ್ವಾರಾ-ಪೂಂಚ್ ವಲಯದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಸತತ ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದಾರೆ.

ಏಪ್ರಿಲ್ 27-28ರ ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಪೂಂಚ್ ವಲಯದಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು ಇದೇ ಮೊದಲು. ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನಿ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಏ.22 ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವುದರ ನಡುವೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಉದ್ವಿಗ್ನತೆ ಹೆಚ್ಚಾಗಿದೆ.

WhatsApp Group Join Now
Telegram Group Join Now
Share This Article