ನವದೆಹಲಿ, ಜೂನ್ 18: ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆ ಬಳಿಕ ಟ್ರಂಪ್ ಆತುರಾತುರವಾಗಿ ದೇಶಕ್ಕೆ ಹಿಂದಿರುಗಿದ ಕಾರಣ ಪ್ರಧಾನಿ ಮೋದಿಗೆ ಮಾತನಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷರು ಭೇಟಿಯಾಗಬೇಕಿತ್ತು. ದರೆ, ಟ್ರಂಪ್ ಅವರು ಅಮೆರಿಕಕ್ಕೆ ಬೇಗನೆ ಮರಳಬೇಕಾಗಿದ್ದರಿಂದ ಸಭೆ ನಡೆಯಲು ಸಾಧ್ಯವಾಗಲಿಲ್ಲ. ಇದರ ನಂತರ, ಟ್ರಂಪ್ ಅವರ ಕೋರಿಕೆಯ ಮೇರೆಗೆ, ಇಬ್ಬರು ನಾಯಕರು ಇಂದು ದೂರವಾಣಿ ಸಂಭಾಷಣೆ ನಡೆಸಿದರು.