ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ

Ravi Talawar
ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ
WhatsApp Group Join Now
Telegram Group Join Now

ಕಾಠ್ಮಂಡು: ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ  ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದೇಶಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯ ವೇಳೆ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಬಹುಮತ ಸಾಬೀತುಪಡಿಸಲು ವಿಫಲರಾಗಿ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು. ಹೀಗಾಗಿ ಸಿಪಿಎನ್‌-ಯುಎಂಎಲ್‌ (Nepal-Unified Marxist Leninist (CPN-UML) ಪಕ್ಷದ ಅಧ್ಯಕ್ಷ, 72 ವರ್ಷದ ಕೆ.ಪಿ.ಶರ್ಮ ಒಲಿ ಪ್ರಧಾನಿಯಾಗಿ ನೇಮಕಗೊಂಡರು. ಈ ಹಿಂದೆ ಅವರು 2015ರ ಅಕ್ಟೋಬರ್ 11ರಿಂದ 2016ರ ಆಗಸ್ಟ್ 3ರವರೆಗೆ, 2018ರ ಫೆಬ್ರವರಿ 5ರಿಂದ 2021ರ ಜುಲೈ 13ರವರೆಗೆ ಕೆ.ಪಿ.ಶರ್ಮಾ ಒಲಿ ನೇಪಾಳದ ಪ್ರಧಾನ ಮಂತ್ರಿಯಾಗಿದ್ದರು. ಒಲಿ ಅವರು ಚೀನಾ ಪರ ಒಲವು ಹೊಂದಿದ್ದಾರೆ.

WhatsApp Group Join Now
Telegram Group Join Now
Share This Article