ಸಿಂಧೂ ಜಲ ಒಪ್ಪಂದ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತ; ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ತಿರುಮಂತ್ರ

Ravi Talawar
ಸಿಂಧೂ ಜಲ ಒಪ್ಪಂದ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತ; ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ತಿರುಮಂತ್ರ
WhatsApp Group Join Now
Telegram Group Join Now

ನವದೆಹಲಿ, ಏಪ್ರಿಲ್, 24: ಪಹಲ್ಗಾಮ್ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಬುಧವಾರ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಕಾರ್ಯತಂತ್ರದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿದ್ದು, ಉಗ್ರರಿಗೆ ಕುಮ್ಮಕ್ಕು ನೀಡುವ ಮೂಲಕ ಕಾಶ್ಮೀರ ಕಣಿವೆಯಲ್ಲಿ 26 ಜನರನ್ನು ಬಲಿ ಪಡೆಯಲು ಬೆಂಬಲ ನೀಡಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡಿದೆ.

ಸಭೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣವಾಗಿ ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ. ಅಟ್ಟಾರಿ ಚೆಕ್ ಪೋಸ್ಟ್ ಮುಚ್ಚಲಾಗುವುದು, ಸಿಂಧೂ ಜಲ ಒಪ್ಪಂದವನ್ನು ತಕ್ಷಣವೇ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ. ಇಂದು ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

WhatsApp Group Join Now
Telegram Group Join Now
Share This Article