ಬೆಂಗಳೂರು, ಜುಲೈ 19: ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿದೆ ಎಂಬ ವರದಿಯ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಹಿಂದಿನ ಕ್ಯಾಂಟೀನ್ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಪಕ್ಷದವರು ಈಗೇನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್‌ಗಳನ್ನು ತೆರೆದಿರುವ ಬಗ್ಗೆ ಹೆಮ್ಮೆಪಟ್ಟು ಕೊಂಡಿದ್ದ ಕಾಂಗ್ರೆಸ್ಸಿಗರೇ, ಕಳೆದ ಬಾರಿಯ ನಮ್ಮ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಕ್ಯಾಂಟೀನ್‌ಗಳನ್ನು ನಾವು ಮುಚ್ಚಿಸಲು ಹೊರಟಿದ್ದೇವೆ ಎಂದು ಅಪಪ್ರಚಾರ ನಡೆಸಿದಿರಿ. ಆದರೆ ಈಗೇನಾಗುತ್ತಿದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.