ಬೆಂಗಳೂರು: ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ ನೀಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ರೂ.50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದಿದ್ದಾರೆ.
ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ನಿಮ್ಮ 50ಕೋಟಿ ಆಮಿಷದ ಆರೋಪಕ್ಕೆ ಸೂಕ್ತ ದಾಖಲಾತಿ, ಮೂಲ ತಿಳಿಸಿ ಎಂದು ಕೇಳಿದ್ದಾರೆ.