6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

Ravi Talawar
6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬಳ್ಳಾರಿ,ಏ.18: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ 2025-26ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ  ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏ.19 ರಿಂದ ಅರ್ಜಿಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗಳಲ್ಲಿ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ 03 ರೊಳಗೆ ಇದೇ ಕಚೇರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮಿಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಆಯಾ ತಾಲ್ಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453, ಮೊ.9986302091 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article