ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನ

Ravi Talawar
ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನ
WhatsApp Group Join Now
Telegram Group Join Now
ನೋಂದಾಯಿತ ಕಟ್ಟಡ ಕಾರ್ಮಿಕರಿಂದ ವಿವಿಧ ಕಟ್‍ಗಳಿಗಾಗಿ ಅರ್ಜಿ ಆಹ್ವಾನ
ಧಾರವಾಡ : ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಧಾರವಾಡ ಜಿಲ್ಲೆಗೆ ಸಂಬಂದಿಸಿದಂತೆ,  ಗೌಂಡಿ ಕಿಟ್-3264, ಎಲೆಕ್ಟ್ರೀಷನ್-812, ವೆಲ್ಡರ್-200, ಕಾರ್ಪೇಂಟರ್-634, ಪೆಂಟರ್-802, ಪ್ಲಂಬರ್-260, ಕಿಟ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಿಟ್ ಪಡೆಯಬೇಕಾದ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ(ನವೀಕರಣಗೊಂಡಿರಬೇಕು), ಆಧಾರ ಕಾರ್ಡ, ಈ ಹಿಂದೆ ಕಿಟ್‍ಗಳನ್ನು ಪಡೆದಿರುವ ಬಗ್ಗೆ ಸ್ವಯಂ ಘೋಷಣಾ ಪತ್ರ ಮತ್ತು ಮೋಬೈಲ್ ಸಂಖ್ಯೆ ಸಲ್ಲಿಸಬೇಕು.
          ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಮತ್ತು ಹಿರಿಯ ಕಾರ್ಮಿಕ ನಿರೀಕ್ಷಕು 1,2,3 ಮತ್ತು 4ನೇ ವೃತ್ತ ಹುಬ್ಬಳ್ಳಿ ಹಾಗೂ ಧಾರವಾಡ ವೃತ್ತದ ಕಛೇರಿಗಳು, ಕಾರ್ಮಿಕ ಅಧಿಕಾರಿಯವರ ಕಛೇರಿ, ಉಪ ವಿಭಾಗ-1 ಮತ್ತು 2, ಹುಬ್ಬಳ್ಳಿ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ ಹುಬ್ಬಳ್ಳಿ ಕಚೇರಿಗಳಿಗೆ ನವೆಂಬರ 5, 2025 ರೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪುರಸ್ಕರಿಸಲಾಗುವುದಿಲ್ಲ. ಹಾಗೂ ಬಂದಂತಹ ಅರ್ಜಿಗಳನ್ನು ನಿಯಮಾನುಸಾರ ಮತ್ತು ಜೇಷ್ಠತೆ ಅನುಸಾರ ಆಯ್ಕೆ ಮಾಡಿ ಹಂಚಿಕೆ ಮಾಡಲಾಗುವುದು.
       ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ನಿರೀಕ್ಷಕರು, ಹಿರಿಯ ಕಾರ್ಮಿಕ ನಿರೀಕ್ಷಕರು ಮತ್ತು ಕಾರ್ಮಿಕ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article