ಚಂಡೀಗಢ: ಐಪಿಎಸ್ ಅಧಿಕಾರಿ ವೈ ಪೂರನ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದ ಹಿರಿಯ ಅಧಿಕಾರಿಗಳ ಕಿರುಕುಳ ಆರೋಪದ ವಿರುದ್ಧ ಕ್ರಮ ವಹಿಸುವಂತೆ ಮೃತ ಅಧಿಕಾರಿ ಕುಟುಂಬ ಹಾಗೂ ಪ್ರತಿಪಕ್ಷಗಳು ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿವೆ. ಈ ಬೆನ್ನಲ್ಲೇ ಇದೀಗ ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಸರ್ಕಾರ ರಜೆಯ ಮೇಲೆ ಕಳುಹಿಸಿದೆ.
ಸೋಮವಾರ ಈ ಬೆಳವಣಿಗೆ ನಡೆದಿದ್ದು, ರಾಜ್ಯ ಸರ್ಕಾರ ರೋಹ್ಟಕ್ ಎಸ್ಪಿ ನರೇಂದ್ರ ಬಿಜರ್ನಿಯಾ ಅವರನ್ನು ವರ್ಗಾವಣೆ ಮಾಡಿದೆ.
ಈ ಕುರಿತು ಮಾತನಾಡಿರುವ ಹರಿಯಾಣ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ರಾಜೀವ್ ಜೈಟ್ಲಿ, ಹೌದು, ಡಿಜಿಪಿಯನ್ನು ರಜೆ ಮೇಲೆ ಸರ್ಕಾರ ಕಳುಹಿಸಿದೆ ಎಂದಿದ್ದಾರೆ.
ಐಪಿಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಏಳು ದಿನಗಳ ನಂತರವೂ ಕುಮಾರ್ ಅವರ ಕುಟುಂಬವು ಸೋಮವಾರ ಸಹ ಶವಪರೀಕ್ಷೆ ಮತ್ತು ಅಂತ್ಯಕ್ರಿಯೆಗೆ ಒಪ್ಪಿಗೆ ನೀಡಿಲ್ಲ. ಈ ನಡುವೆ ಪ್ರಕರಣ ರಾಜಕೀಯ ಕಾವನ್ನು ಪಡೆದಿದ್ದು, ಇಂದು ಮೃತ ಅಧಿಕಾರಿ ಕುಟುಂಬಸ್ಥರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.