ನವದೆಹಲಿ, ಭಾರತವು ಬಾಹ್ಯಾಕಾಶದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಇಸ್ರೋ ಸ್ಪೇಸ್ ಡಾಕಿಂಗ್(SpaDeX)ನಲ್ಲಿ ಯಶಸ್ಸನ್ನು ಸಾಧಿಸಿದೆ. ಇಸ್ರೋ ಮೊದಲ ಬಾರಿಗೆ ಎರಡು ಉಪಗ್ರಹಗಳನ್ನು ಭೂಮಿಯ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಿದೆ. ಇದರೊಂದಿಗೆ ಅಮೆರಿಕ, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದು ನಿಜಕ್ಕೂ ಭಾರತಕ್ಕೆ ಹೆಮ್ಮೆಯ ಕ್ಷಣ. ಈ ಐತಿಹಾಸಿಕ ಸಾಧನೆಗಾಗಿ ಇಸ್ರೋವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಇಸ್ರೋದ ಸ್ಪೇಸ್ ಡಾಕಿಂಗ್ ಪ್ರಯೋಗ ಯಶಸ್ವಿ!
ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್ನ ಯಶಸ್ಸಿಗಾಗಿ ನಮ್ಮ ಇಸ್ರೋ ವಿಜ್ಞಾನಿಗಳು ಮತ್ತು ಇಡೀ ಬಾಹ್ಯಾಕಾಶ ಸಮುದಾಯಕ್ಕೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಹೇಳಿದರು. ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಇದು ಪ್ರಮುಖ ಹೆಜ್ಜೆಯಾಗಿದೆ. ಈ ಕಾರ್ಯಾಚರಣೆಯ ಪ್ರಯೋಗವು ಜನವರಿ 12 ರಂದು ಪೂರ್ಣಗೊಂಡಿತು.