ಬಳ್ಳಾರಿ,ಅ.19 ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಹೆಚ್ಚಾಗಿ ಯುವಕರು ಮತ್ತು ಸಾರ್ವಜನಿಕರು ಮರಣ ಹೊಂದುತ್ತಿದ್ದಾರೆ. ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದರಿಂದ ಜೀವವನ್ನು ಉಳಿಸಿಕೊಳ್ಳಬಹುದು ಎಂದು ಬಳ್ಳಾರಿ ಜಿಲ್ಲಾ ಶಾಖೆಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ.ಎಂ.ಎ.ಷಕೀಬ್ ಅವರು ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟಿçÃಯ ಸಿ.ಪಿ.ಆರ್ ಸಪ್ತಾಹ ನಿಮಿತ್ತ ಶುಕ್ರವಾರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಾರ್ವಜನಿಕರಿಗೆ ಮತ್ತು ಡಿಪೋ ಕಾರ್ಮಿಕರಿಗೆ ಹಾಗೂ ವಾಹನ ಚಾಲಕರಿಗೆ ಸಿಪಿಆರ್ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೃದಯಘಾತ ಅಥವಾ ಎದೆ ನೋವು ನಮಗೆ ಅನೇಕ ರೀತಿಯಿಂದ ತೊಂದರೆ ಉಂಟುಮಾಡುತ್ತದೆ. ಇಂಥಹ ಸಂದರ್ಭದಲ್ಲಿ ಹೃದಯ ನೋವಿನಿಂದ ಬಳಲುತ್ತಿರುವ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸುವ ಮುನ್ನ ಅವರ ಉಸಿರಾಟದ ತೊಂದರೆ ಆದಾಗ ಇವರಿಗೆ ಸಿಪಿಆರ್ ಮಾಡುವುದರ ಮೂಲಕ ಆಸ್ಪತ್ರೆಗೆ ಸೇರಿಸಿ ಅಮೂಲ್ಯವಾದ ಜೀವವನ್ನು ಉಳಿಸಲು ಪ್ರಯತ್ನಿಸಬಹುದು ಎಂದು ಅಣಕು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಯ ವಿಭಾಗೀಯ ನಿಯಂತ್ರಣಾಧಿಕಾರಿ ಅಹಮಿದಿನ್ ಬಗಾನ್, ಡಿಪೋ ಹಿರಿಯ ಮ್ಯಾನೇಜರ್, ಕೆಎಸ್‌ಆರ್‌ಟಿಸಿ ಸಂಸ್ಥೆಯ ಕಾರ್ಮಿಕರು ಮತ್ತು ವಾಹನ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.