ತಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ : ನ್ಯಾ. ಜಗದೀಶ ಬಿಸೇರೊಟ್ಟಿ

Sandeep Malannavar
ತಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ : ನ್ಯಾ. ಜಗದೀಶ ಬಿಸೇರೊಟ್ಟಿ
WhatsApp Group Join Now
Telegram Group Join Now

ರಾಯಬಾಗ:ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.

ಶುಕ್ರವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಚ್ಛತ ದಿನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಕೆಲಸದ ಸ್ಥಳಗಳು, ಮನೆಗಳನ್ನು ಸ್ವಚವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದರು.
ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಎಸ್.ಎಮ್.ಸಲಗರೆ, ಎಮ್.ಎಮ್.ಪಾಟೀಲ ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.
WhatsApp Group Join Now
Telegram Group Join Now
Share This Article