ದಿ. ೩೦ ರಂದು ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ : ಜಗದೀಶ ಬೂದಿಹಾಳ

Pratibha Boi
ದಿ. ೩೦ ರಂದು ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ : ಜಗದೀಶ ಬೂದಿಹಾಳ
WhatsApp Group Join Now
Telegram Group Join Now

ಬೈಲಹೊಂಗಲ- ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಬೆಳಗಾವಿಯಲ್ಲಿ ಜು. ೩೦ ರಂದು ಬುಧವಾರ ಬೆಳಿಗ್ಗೆ ೧೦-೦೦ ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂಬಾಗದಲ್ಲಿ ರಾಣಿ ಚೆನ್ನಮ್ಮ ವೃತ್ತದಿಂದ ಚಕ್ಕಡಿ, ಟ್ಯ್ರಾಕ್ಟರ್‍ಗಳ ಮೂಲಕ ರ್ಯಾಲಿ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ರೈತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ ಬೂದಿಹಾಳ ಕರೆ ನೀಡಿದರು.

ಅವರು ನಗರದ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಸರಕಾರದ ಆಡಳಿತಕ್ಕೆ ಬಂದಾಗಿನಿಂದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರಂಭಿಸಿದ್ದ ಮಹತ್ವಕಾಂಕ್ಷೆಯ ಹಲವಾರು ಯೋಜನೆಗಳನ್ನು ಪ್ರಸ್ತುತ ಸರಕಾರ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಕಡಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ವಿದ್ಯಾನಿಧಿ,ಬೈಸಿಕಲ ಭಾಗ್ಯ,ರೈತರಿಗೆ ನೀಡಲಾಗುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಸಂಪೂರ್ಣ ನಿಲ್ಲಿಸಲಾಗಿದೆ ಎಂದು ಕಿಡಿಕಾರಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ ಮಾತನಾಡಿ, ಬಿಜೆಪಿ ಆಡಳಿದ ಸಂದರ್ಭದಲ್ಲಿ ಕಿಸಾನ್ ಸಮ್ಮಾನ ಹೆಸರಿನಲ್ಲಿ ನೀಡಲಾಗುತ್ತಿದ್ದ ರಾಜ್ಯದ ೫೨ ಲಕ್ಷ ರೈತರಿಗೆ ತಲಾ ೪೦೦೦ ರೂ ಗಳನ್ನು ನಿಲ್ಲಿಸಲಾಗಿದೆ. ರೈತರಿಗೆ ಪಂಪ್ ಸೆಟ್ ಅಳವಡಿಸಲು ಬಿಜೆಪಿ ಸರಕಾರದಲ್ಲಿ ೨೫೦೦೦, ನಿಗದಪಡಿಸಿದ್ದು, ಪ್ರಸ್ತುತ ಭ್ರಷ್ಟ ಕಾಂಗ್ರೆಸ್ ಆಡಳಿತ ಅದನ್ನು ೩ ಲಕ್ಷಕ್ಕೆ ಏರಿಕೆ ಮಾಡಿ ರೈತರಿಗೆ ಹೊರೆಯಾಗಿಸಿದೆ. ಅಲ್ಲದೇ ಬಿತ್ತನೆ ಬೀಜ ಪ್ರತಿ ಕ್ವೀಟಾಲ್ ಗೆ ಶೇ ೨೦ ಏರಿಕೆ. ಬರ ಪರಿಹಾರದ ಹೆಸರಿನಲ್ಲಿ ೩೪೫೪ ಕೋಟಿ ಲೂಟಿ ಮಾಡುತ್ತಾ ಜನರನ್ನು ಹಗಲು ದರೋಡೆ ಮಾಡುತ್ತಿದೆ ಎಂದು ಗಂಭೀರವಾಗಿ ಅಪಾದಿಸಿದರು.

ರಾಜ್ಯದ ರೈತರಿಗೆ ೬.೩೦ ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಅವಶ್ಯಕತೆ ಇದ್ದು, ಈಗಾಗಲೇ ಕೇಂದ್ರ ಸರಕಾರ ೮.೭೩ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಿರುತ್ತದೆ. ಉಳಿದ ೨.೪೩ ಲಕ್ಷ ಮೆಟ್ರಿಕ್ ಟನ್‌ನ್ನು ಕಾಳ ಸಂತೆಯಲ್ಲಿ ಕಾಂಗ್ರೆಸ್ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ೩೪೦೦ ಕ್ಕಿಂತ ಹೆಚ್ಚು ರೈತರು ಆತ್ಮ ಹತ್ಯೆಗೆ ಶರಣಾಗಿರುವುದು ದುರದೃಷ್ಟಕರ ಸಂಗತಿ. ಭೂ ಸಿರಿ ಯೋಜನಯಡಿ ಸಿರಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟರ್ ಗೆ ನೀಡುವ ೧೦೦೦೦ ರೂ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ.ಹಾವೇರಿ ಮತ್ತು ರಾಣೇಬೆನ್ನೂರಿನಲ್ಲಿ ರಸಗೊಬ್ಬರ ಖರೀದಿಸಲು ಆಗಮಿಸಿದ ರೈತರ ಮೇಲೆ ಪೋಲೀಸರಿಂದ ಲಾಠಿ ಚಾರ್ಜ್ ಮಾಡಿಸಿದ್ದು ಖಂಡನೀಯವಾಗಿದೆ. ಈಗಾಗಲೇ ರಾಜ್ಯದಲ್ಲಿ ಅವೈಜ್ಞಾನಿವಾಗಿ ರಸಗೊಬ್ಬರ ದಾಸ್ತಾನು ಶೇಖರಣೆ ಮಾಡಿದ್ದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರೈತರಿಗೆ ರಸಗೊಬ್ಬರದ ಅಭಾವ ಉಂಟಾಗಿದ್ದು ಕೂಡಲೇ ರೈತರಿಗೆ ವಿತರಿಸುವಂತೆ ಆಗ್ರಹಿಸಿದರು.

ಸರಕಾರ ಸೇರಿದಂತೆ ಕೃಷಿ ಸಚಿವರು ಇಲಾಖೆ ಅಧಿಕಾರಿಗಳು ಸಂಪೂರ್ಣ ನಿಷ್ಕ್ರಿಯಗೊಂಡಿದ್ದಾರೆ.ಇದೇ ರೀತಿ ರಾಜ್ಯದಲ್ಲಿನ ಹಲವಾರು ರೈತ ವಿರೋಧಿ ನೀತಿಯನ್ನು ಖಂಡಿಸಿ ಜು. ೩೦ ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆ ಯಲ್ಲಿ ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ ನಗರ, ಗ್ರಾಮಾಂತರ, ಸೇರಿದಂತೆ ವಿವಿಧ ರೈತ ಸಂಘಟನೆಗಳು, ಜಿಲ್ಲೆಯ ಬಿಜೆಪಿಯ ಹಾಲಿ, ಮಾಜಿ ಶಾಸಕರು,ಪಕ್ಷದ ಪ್ರಮುಖರು,ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ಯಲ್ಲಿ ಭಾಗವಸಬೇಕೆಂದು ಮನವಿ ಮಾಡಿದರು.

 

WhatsApp Group Join Now
Telegram Group Join Now
Share This Article