ಗೋವು ರಕ್ಷಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಿರೋಧ ನೀತಿಗೆ ಖಂಡನೆ: ಜಗದೀಶ ಬೂದಿಹಾಳ

Ravi Talawar
ಗೋವು ರಕ್ಷಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಿರೋಧ ನೀತಿಗೆ ಖಂಡನೆ: ಜಗದೀಶ ಬೂದಿಹಾಳ
WhatsApp Group Join Now
Telegram Group Join Now
 ಬೈಲಹೊಂಗಲ: ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಜಗದೀಶ ಬೂದಿಹಾಳ ಅವರು. ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಒಂದು ಬಹು ಮುಖ್ಯವಾದ ವಿಚಾರ, ಗೋವುಗಳಿಗೆ‌ ಮತ್ತು ಮುನುಷ್ಯರಿಗೆ ಮತ್ತು ಪ್ರಕೃತಿಗೆ ಅವಿನಾಭಾವ ಸಂಬಂಧ. ಭಾರತೀಯ ಪರಂಪರೆಯಲ್ಲಿ ಗೋ ಮಾತೆಗೆ ತನ್ನದೆ ಆದ ಸ್ಥಾನವಿದೆ.
ಈ ದೇಶದಲ್ಲಿ ಕೃಷಿ ಏನಾದರು ಉಳಿದಿದ್ದರೆ, ಅದು ಗೋ ಮಾತೆಯ ಕಾಣಿಕೆ. ಆದರೆ, ರಾಜ್ಯದ ಕೋಟ್ಯಾಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಅಸಡ್ಡೆಯನ್ನು ತೋರಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತ ನಡೆಸುತ್ತಿದ್ದ ಸಮಯದಲ್ಲಿ ರಾಜ್ಯಾದ್ಯಂತ ಒಟ್ಟು 15 ಜಿಲ್ಲೆಗಳಲ್ಲಿ ಗೋ ಶಾಲೆಗಳನ್ನು ಪ್ರಾರಭಿಸಿತ್ತದೆ. ಆದರೆ, ನಂತರ ಬಂದ ಕಾಂಗ್ರೆಸ್ ಸರ್ಕಾರವು ಬಹು ಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತರುವ ಉದ್ದೇಶದಿಂದ ಗೋ ಶಾಲೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿ ಅದರ ಮೂಲ ಉದ್ದೇಶಗಳಿಗೆ  ತೊಂದರೆಕೊಡುವ ಮೂಲಕ‌ ಗೋ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಕರ್ನಾಟಕ ರಾಜ್ಯದ ಮತದಾರರಿಗೆ ಮಾಡಿರುವ  ಅನ್ಯಾಯವಾಗಿದೆ.
ರಾಜ್ಯದಲ್ಲಿ 1.10 ಕೋಟಿ ಜಾನುವಾರುಗಳಿದ್ದು, ಇವುಗಳ ಸಂರಕ್ಷಣೆಮಾಡಲು ಮತ್ತು ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಸಾಕಷ್ಟು ಕೇಂದ್ರ ಪುರಸ್ಕೃತ ಯೋಜನೆಗಳನ್ನು ರೂಪಿಸಿದೆ. ಈ ಕಾರ್ಯಕ್ರಮಗಳನ್ನು ಅನುಷ್ಟಾನಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲಗೊಂಡಿದೆ.
ಈ ವಿಫಲತೆಯು ರಾಜ್ಯ ಸರ್ಕಾರದ ನಿಷ್ಕ್ರಿಯತೆಯನ್ನು ಎತ್ತಿ ತೋರಿಸುತ್ತದೆ. ಗೋ ಶಾಲೆಗಳನ್ನು ಮುಚ್ಚುವ ಮುಖಾಂತರ ಗೋ ಕಳ್ಳ ಸಾಗಣೆಯನ್ನು ಉತ್ತೇಜನ ನೀಡುವಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯ ರೈತ ಮೋರ್ಚಾವು ಸರ್ಕಾರವನ್ನು ಒತ್ತಾಯಿಸುವುದೇನೆಂದರೆ ಗೋ ಶಾಲೆಗಳನ್ನು ಪುನರಾರಂಭಿಸಬೇಕು, ಗೋ ಶಾಲೆಗಳಿಗೆ ವಿಶೇಷ ಅನುದಾನವನ್ನು ನೀಡಬೇಕು, ಕೇಂದ್ರ ಪುರಸ್ಕೃತ ಗೋ ಆಧಾರಿತ ಯೋಜನೆಗಳನ್ನು ಶೀಘ್ರ ಅನುಷ್ಟಾನಕ್ಕೆ ಕ್ರಮ ಕೈಗೊಳ್ಳಬೇಕು, ಈ ರಾಜ್ಯದ ಬಹು ಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗದ ರೀತಿ ನಡೆದುಕೊಳ್ಳಬೇಕು. ಈ ಮೇಲ್ಕಂಡ ಅಂಶಗಳನ್ನು ರಾಜ್ಯ ಸರ್ಕಾರ ಗಮನಿಸದಿದ್ದರೆ ರಾಜ್ಯ ರೈತ ಮೋರ್ಚಾದ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಈ ಸಂದರ್ಭದಲ್ಲಿ ರೈತ ಮೋರ್ಚಾ ಹಾಗೂ ಬಿಜೆಪಿ ಪದಾಧಿಕಾರಿಗಳು, ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article