ಬಳ್ಳಾರಿ,ಜ.05 -ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಸಿಇಪಿಎಂಐಜೆಡ್ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ಗಣಿಬಾಧಿತ 10 ಗ್ರಾಮಗಳ ವಸತಿ ರಹಿತರಿಗೆ ಕರ್ನಾಟಕ ಪುನಶ್ಚೇತನ ಅಭಿವೃದ್ಧಿ ನಿಗಮದಿಂದ ಅನುಮೋದನೆಯಾದ ಮನೆಗಳ ಶಂಕುಸ್ಥಾಪನೆಯನ್ನು
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು
ಬಳ್ಳಾರಿ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಭಾನುವಾರ ನೆರವೇರಿಸಿದರು.
ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಹಾಗೂ ರಾಜೀವ ಗಾಂಧಿ ವಸತಿ ನಿಗಮ ನಿಯಮಿತದಡಿ ಅನುಷ್ಠಾನಗೊಳ್ಳುವ ಬಳ್ಳಾರಿ ತಾಲ್ಲೂಕಿನ ಗಣಿಬಾಧಿತ 10 ಗ್ರಾಮಗಳಲ್ಲಿ ಅನುಮೋದನೆಯಾದ ಒಟ್ಟು 862 ಮನೆಗಳ ಶಂಕುಸ್ಥಾಪನೆ ಸಚಿವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ರಾಜಶೇಖರಗೌಡ, ಬೆಳಗಲ್ಲು ಗ್ರಾಪಂ ಅಧ್ಯಕ್ಷೆ ಲಕ್ಷ್ಮೀಭಾಯಿ ಚಂದ್ರ ನಾಯ್ಕ್, ಉಪಾಧ್ಯಕ್ಷೆ ಉಮಾದೇವಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ತಾಪಂ ಇಓ ಡಾ.ಶ್ರೀಧರ್ ಐ.ಬಾರಿಕರ ಸೇರಿದಂತೆ ಪಿಡಿಒ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರು, ಸಾರ್ವಜನಿಕರು ಇದ್ದರು.


