ಹಿಂದೂಗಳ ಹಬ್ಬಗಳ ಮೇಲೆಯೇ ಕಾಂಗ್ರೆಸ್​​ಗೆ ಕಾಮಾಲೆ ಕಣ್ಣು: ಜೆಡಿಎಸ್ ಕಿಡಿ

Ravi Talawar
ಹಿಂದೂಗಳ ಹಬ್ಬಗಳ ಮೇಲೆಯೇ ಕಾಂಗ್ರೆಸ್​​ಗೆ ಕಾಮಾಲೆ ಕಣ್ಣು:  ಜೆಡಿಎಸ್ ಕಿಡಿ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 10: ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಜೆಡಿಎಸ್, ಹಿಂದೂಗಳ ಹಬ್ಬಗಳ ಮೇಲೆಯೇ ಕಾಂಗ್ರೆಸ್​​ಗೆ ಕಾಮಾಲೆ ಕಣ್ಣು ಎಂದು ಕಿಡಿ ಕಾರಿದೆ.

ಪ್ರತೀ ಹಿಂದೂಗಳ ಮನೆಯಲ್ಲಿ ನಡೆಯುವಂತೆ ಕುಮಾರಸ್ವಾಮಿ ಮನೆಯಲ್ಲಿಯೂ ಹೊಸತೊಡಕು ಆಚರಣೆ ನಡೆಯುತ್ತಿದೆ. ಅದರಲ್ಲಿ ವಿಶೇಷವೇನೂ ಇಲ್ಲ. ಹೊಸತೊಡಕು ಊಟಕ್ಕೆ ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಸಹಪಾಠಿಗಳನ್ನು ಅವರು ಆಹ್ವಾನಿಸಿದ್ದಾರೆ. ಮಾಂಸದ ಅಡುಗೆ ಈ ದಿನದ ಸಾಮಾನ್ಯ ತಿನಿಸು. ಈ ಊಟಕ್ಕೂ ಕಾಂಗ್ರೆಸ್ ಕಲ್ಲು ಹಾಕಿ ವಿಕೃತಿ ಮೆರೆದಿದೆ ಎಂದು ಜೆಡಿಎಸ್ ಟೀಕಿಸಿದೆ.

ಮತಕ್ಕಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಪ್ರಿಜ್ಡ್, ಕೂಪನ್ ಹಂಚುವ ಸತ್ಸಂಪ್ರದಾಯ ರೂಢಿಸಿಕೊಂಡಿರುವ ಕಾಂಗ್ರೆಸ್, ಕಾವೇರಿ ಅಮ್ಮನ ಹೆಸರಿನಲ್ಲಿ ನಡೆಸಿದ ಮೇಕೆದಾಟು ಪಾದಯಾತ್ರೆಯಲ್ಲಿ ನದಿಯಂತೆ ಹರಿಸಿದ ಮಾಂಸ, ಮದ್ಯದ ಹೊಳೆಯನ್ನು ಕಾಣದವರು ಯಾರೂ ಇಲ್ಲ. ಆದರೆ, ಆ ಪಕ್ಷದ ಕಾಮಾಲೆ ಕಣ್ಣು ಹಿಂದೂಗಳ ಹಬ್ಬಗಳ ಮೇಲೆಯೇ ಬಿದ್ದಿದೆ. ಜಾತಿ, ಧರ್ಮಗಳ ತುಷ್ಟೀಕರಣ ಜಾಡ್ಯ ಕಾಂಗ್ರೆಸ್ ಪಕ್ಷವನ್ನು ಅಂಟಿಕೊಂಡಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

WhatsApp Group Join Now
Telegram Group Join Now
Share This Article