ಬಳ್ಳಾರಿ. ಆ.05: . ರಾಜ್ಯ ಸರ್ಕಾರ ರೈತರಿಗೆ ಅಗತ್ಯವಿರುವ ರಸ ಗೊಬ್ಬರವನ್ನು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಯೂರಿಯಾ ಮತ್ತು ಡಿ.ಪಿ.ಎ.ಗಳನ್ನು ಸಮರ್ಪಕ ರೀತಿಯಲ್ಲಿ ವಿತರಿಸದೇ ಇರುವುದರಿಂದ ರೈತರು ಬರದಾಡುವಂತಾಗಿದೆ. ಈ ರಸ ಗೊಬ್ಬರಗಳು ಕಾಳಸಂತೆಯಲ್ಲಿ ವರ್ತಕರು ಮನಸು ಇಚ್ಛೆ ಹೆಚ್ಚಿನ ಧರದಲ್ಲಿ ಮಾರಾಟ ಮಾಡುತ್ತಿದ್ದಾರೆ ರಸಗೊಬ್ಬರವನ್ನು ಸಮರ್ಪಕ ರೀತಿಯಲ್ಲಿ ಪೂರಿಸಲು ಕ್ರಮ ಕೈಗೊಳ್ಳಬೇಕೆಂದು ಬಳ್ಳಾರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಿನಳ್ಳಿ ತಾಯಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು
ಅವರು ಇಂದು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನೆ ಪತ್ರವನ್ನು ಸಲ್ಲಿಸಿ ಮಾತನಾಡಿ,ರಾಜ್ಯದಲ್ಲಿ ಕಳೆದ 2 ವರ್ಷಗಳಿಂದ ಅಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಲಂಚಗುಳಿತನ, ದುರಾಡಳಿತ ಮತ್ತು ಆಡಳಿತ ವೈಫಲ್ಯತೆಯಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ , ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರುನಲ್ಲಿ ಉತ್ತಮ ಮಳೆ ಬಿದ್ದು ರಾಜ್ಯದ ರೈತರು ತಮ್ಮ ಬಹುತೇಕ ಕೃಷಿ ವಿರ್ಸ್ತೀದಲ್ಲಿ ಕೃಷಿ ಚಟುವಟಿಕೆ ಪ್ರಾರಂಭಿಸಿ ಬಿತ್ತನೆಯಲ್ಲಿ ತೊಡಗಿದ್ದಾರೆ ಹಾಗೂ ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಹಾಗೂ ಕೆರೆ ಕಟ್ಟೆಗಳು ಭರ್ತಿಗೊಂಡಿದ್ದು. ನೀರಾವರಿ ಅಚ್ಚುಕಟ್ಟಿನಲ್ಲಿ ರೈತರು ಸಾಗುವಳಿ ಪ್ರಾರಂಭಿಸಿದ್ದಾರೆ.
ರಾಜ್ಯ ರಾಜ್ಯಕ್ಕೆ ಕೊರತೆ ಇರುವ ರಸ ಗೊಬ್ಬರಗಳನ್ನು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಸಂಪರ್ಕಿಸಿ ಪಡೆಯಲು ವಿಫಲವಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ 6.8 ಲಕ್ಷ ಟನ್ ರಸ ಗೊಬ್ಬರ ನಿಗದಿ ಮಾಡಿದ್ದು, ಈ ಪೈಕಿ ಕೇವಲ 5.27 ಲಕ್ಷ ಟನ್ ರಸ ಗೊಬ್ಬರ ನೀಡಿರುವುದಾಗಿ ರಾಜ್ಯ ಸರ್ಕಾರ ಆಪಾದನೆ ಮಾಡುತ್ತಿದೆ. ಆದರೆ, ಬಾಕಿಯಿರುವ 1.5 ಲಕ್ಷ ಟನ್ ರಸ ಗೊಬ್ಬರವನ್ನು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಮುಂದುವರೆದು ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು. ಹಾಸನ ಹಾಗೂ ಕಳೆದ 2 ತಿಂಗಳಿಂದ ಮುಂಗಾರು ಮಳೆ ಅಬ್ಬರದಿಂದ ಉಂಟಾದ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಭಾರಿ ಪ್ರಮಾಣದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಅಸ್ತಿ-ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ. ಆದರೆ, ರಾಜ್ಯ ಸರ್ಕಾರ ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ಅಗತ್ಯ ಅನುದಾನ ನೀಡಿ ನೆರೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸಿದರು.
ಅಲ್ಲದೇ. ರಾಜ್ಯದ ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು. ಚಿತ್ರದುರ್ಗ, ದಾವಣಗೆರೆ, ಬೆಂಗಳೂರು, ಬೀದರ, ಬಳ್ಳಾರಿ, ವಿಜಯನಗರ ಹಾಗೂ ಬೆಳಗಾವಿ ಜಿಲ್ಲೆಯ ಹಲವು ಭಾಗಗಳು ಹಾಗೂ ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಕಳೆದ 6 ವಾರಗಳಿಂದ ಮಳೆ ಕೊರತೆಯಿಂದ ರೈತರು ನಾಟಿ ಮಾಡಿದ ಫಸಲು ಒಣಗುತ್ತಿವೆ. ರೈತರು ಕೃಷಿ ಚಟುವಟಿಕೆ ನಡೆಸಲು ಆಕಾಶದತ್ತ ಮುಖ ಮಾಡಿದ್ದಾರೆ. ಜನಜಾನುವಾರುಗಳಿಗೆ ಕುಡಿಯುವ ನೀರು, ಆಹಾರ ಮತ್ತು ಮೇವಿನ ಕೊರತೆ ಎದುರಿಸುತ್ತಿದ್ದಾರೆ ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಎಚ್ಚರ ವಹಿಸದೇ ತಿರಸ್ಕಾರ ಮನೋಭಾವದಿಂದ ನೋಡುತ್ತಿದೆ ಕಾಂಗ್ರೆಸ್ ನಡೆಯನ್ನು ಖಂಡಿಸಿದರು
, ಮಳೆ ಮತ್ತು ನೆರೆ ಹಾವಳಿಯಿಂದ ಫಸಲು ನಷ್ಟಕ್ಕೆ ಮತ್ತು ಮಳೆ ಆಭಾವದಿಂದ ಹಾಳಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಫಸಲು ವಿಮಾ ಕಂಪನಿಗಳಿಂದ ರೈತರಿಗೆ ಪರಿಹಾರ ನೀಡಬೇಕು ಈ ಎಲ್ಲಾ ವೈಫಲ್ಯಗಳಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲು ನೈತಿಕವಾಗಿ ಅಧಿಕಾರ ಕಳೆದುಕೊಂಡಿದೆ. ಈ ಹಿನ್ನಲೆಯಲ್ಲಿ ಗೌರವಾನ್ವಿತ ರಾಜ್ಯಪಾಲರು. ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನವಿತ್ತು ಎಚ್ಚರಿಕೆ ನೀಡಿ, ರೈತರ ಸಮಸ್ಯೆ ಹಾಗೂ ನೆರೆ ಹಾವಳಿಯಿಂದ ನೊಂದ ಸಂತ್ರಸ್ತರಿಗೆ ಹಾಗೂ ಮಳೆ ಅಭಾವದಿಂದ ಫಸಲನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರನ್ನು ಕೋರಿದರು .
ಒಂದು ವೇಳೆ ರಾಜ್ಯ ಸರ್ಕಾರ ಸಂವಿಧಾನ ರೀತಿ ಕಾರ್ಯನಿರ್ವಹಿಸದಿದ್ದಲ್ಲಿ ಗೌರವಾನ್ವಿತ ರಾಜ್ಯಪಾಲರು ರಾಜ್ಯ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇವೆ ಎಂದರು.. ಬಳ್ಳಾರಿ ಜಿಲ್ಲಾಧ್ಯಕ್ಷರಾದ ಡಿ. ಮೀನಳ್ಳಿ ತಾಯಣ್ಣ ರವರ ನೇತೃತ್ವದಲ್ಲಿ ಈ ಪ್ರತಿಭಟನೆಯಲ್ಲಿ ಲಕ್ಷ್ಮೀಕಾಂತ್ ರೆಡ್ಡಿ , ಮಹಿಳಾ ಅಧ್ಯಕ್ಷೆ ಪುಷ್ಪಾ, ಅಶೋಕ ಸಂಗನಕಲ್ಲು, ಪ್ರಭಾಕರ ರೆಡ್ಡಿ,ಕಿರಣ್, ಜಾವೀದ್ ,ಮುತ್ತು, ಪ್ರದೀಪ್, ದಿವಾಕರ, ವನ್ನೂರು ವಲಿ, ಶಿವನಾರಾಯಣ,ರುಮಾನ,ರೇಷ್ಮಾ, ರೆಹಮತ್,ವಿಜಯ, ರಾಜೇಶ್ವರಿ, ಲಕ್ಷ್ಮೀ, ಮತ್ತು ಇತರ ಕಾಯ೯ಕತ೯ರು ಉಪಸ್ಥಿತರಿದ್ದರು.