ಬೆಂಗಳೂರು,ಏಪ್ರಿಲ್ 10: : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎನ್ ಡಿಎ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿರುವ ಮೂರು ಜೆಡಿಎಸ್ ಅಭ್ಯರ್ಥಿಗಳು ಚುನಾವಾಣೆಯಲ್ಲಿ ಪರಾಭವಗೊಳ್ಳಲಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಡಾ.ಸಿಎನ್ ಮಂಜುನಾಥ್ ಅವರನ್ನೂ ಸಹ ಸೋಲಿಸಲಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.