ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡ ಜ್ಞಾನೇಶ್ ಕುಮಾರ್ ಇಂದು ಬುಧವಾರ ದೆಹಲಿಯಲ್ಲಿ ಅಧಿಕಾರ ವಹಿಸಿಕೊಂಡರು.
ಮೊನ್ನೆ ಸೋಮವಾರ ಉನ್ನತ ಚುನಾವಣಾ ಆಯೋಗದ ನೇತೃತ್ವ ವಹಿಸಲು ಅವರ ಹೆಸರನ್ನು ಘೋಷಿಸಿದ ನಂತರ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಜ್ಞಾನೇಸ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದರು.
ಹಿಂದಿನ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಅಧಿಕಾರಾವಧಿ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಿಇಸಿ ನೇಮಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ರಾಹುಲ್ ಗಾಂಧಿ ಅವರ ನೇಮಕಾತಿಯ ವಿರುದ್ಧ ಮತ ಚಲಾಯಿಸಿದರು, ಸಭೆಯನ್ನು ಅರ್ಥಹೀನ ಎಂದು ಕರೆದರು.
ಜ್ಞಾನೇಶ್ ಕುಮಾರ್ ಇಂದು ಬೆಳಗ್ಗೆ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿದಾಗ, ಅಲ್ಲಿ ಅವರನ್ನು ಚುನಾವಣಾ ಆಯುಕ್ತ ಡಾ. ಸುಖ್‌ಬೀರ್ ಸಿಂಗ್ ಸಂಧು ಸ್ವಾಗತಿಸಿದರು.