ಜಲ ಸಂರಕ್ಷಣೆ ಇಂದಿನ ಅನಿವಾರ್ಯತೆ : ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್

MK HasiruKranti
ಜಲ ಸಂರಕ್ಷಣೆ ಇಂದಿನ ಅನಿವಾರ್ಯತೆ : ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್
WhatsApp Group Join Now
Telegram Group Join Now

ಬಳ್ಳಾರಿ,ಮಾ25.. ಪ್ರಸ್ತುತದಲ್ಲಿ ಜಲ ಸಂರಕ್ಷಣೆಯು ತುಂಬಾ ಅನಿವಾರ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ’ವಿಶ್ವ ಜಲ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೀರನ್ನು ಮಿತವಾಗಿ ಬಳಸಿ, ಮುಂದಿನ ಪೀಳಿಗೆಗಾಗಿ ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ನಿಂಗಪ್ಪ ಹೊಸಮನೆ ಅವರು ಮಾತನಾಡಿ, ಜಲ ಸಂರಕ್ಷಣೆಯ ಕಾನೂನಾತ್ಮಕ ಅರಿವು ಹಾಗೂ ನೀರಿನ ಮಹತ್ವ ಹೊಂದುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

“ನೀರು ಮತ್ತು ಲಿಂಗ ಸಮಾನತೆ” “ಎಲ್ಲಿ ನೀರು ಹರಿಯುತ್ತದೆಯೋ, ಅಲ್ಲಿ ಸಮಾನತೆ ಬೆಳೆಯುತ್ತದೆ” ಎಂಬುದು 2026 ರ ಘೋಷವಾಕ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಪ್ರಹ್ಲಾದ ಜೋಶಿ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ಇಂಧುದರ ಸೇರಿದಂತೆ ವಿವಿಧ ತಾಲ್ಲೂಕುಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಹಾಗೂ ಜಿಪಂ DPM, MIS ವಿಭಾಗದ ಸಿಬ್ಬಂದಿ, ಪ್ರಯೋಗಾಲಯದ ಸಿಬ್ಬಂದಿ, DTSU ಮತ್ತು ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article