ಅಬಕಾರಿ ನೀತಿ ಪ್ರಕರಣ ಸಂಬಂಧ ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ

Ravi Talawar
ಅಬಕಾರಿ ನೀತಿ ಪ್ರಕರಣ ಸಂಬಂಧ ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್​ 8ರವರೆಗೆ ವಿಸ್ತರಣೆ
WhatsApp Group Join Now
Telegram Group Join Now

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್​ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಸಹಾಯ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಇದನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮೇ 10 ರಂದು, ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಚುನಾವಣೆ ಮುಗಿದ ತಕ್ಷಣ ಜೂನ್ 2ರಂದು ಜೈಲಿಗೆ ಮರಳಿದ್ದರು.

ಇದೇ ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಸಂಬಂಧ ಬಂಧಿತವಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ಜುಲೈ ೩೧ರವರೆಗೆ ವಿಸ್ತರಿಸಲಾಗಿದೆ.

 

WhatsApp Group Join Now
Telegram Group Join Now
Share This Article