ಮೀನುಗಾರರ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ:ಡಿ.ಕೆ. ಶಿವಕುಮಾರ್ ಘೋಷಣೆ

Ravi Talawar
ಮೀನುಗಾರರ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ:ಡಿ.ಕೆ. ಶಿವಕುಮಾರ್ ಘೋಷಣೆ
WhatsApp Group Join Now
Telegram Group Join Now

ಮುರುಡೇಶ್ವರ: ಈ ಹಿಂದೆ ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದರು.

ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಸಮೀಕ್ಷೆ ಪ್ರಕಾರ 99% ಮೀನುಗಾರರು ಆರ್ಥಿಕವಾಗಿ ಹಿಂದುಳಿದಿದ್ದು, ಈ ಮೀನುಗಾರರ ರಕ್ಷಣೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನು ಮಾರಾಟ ಮಾಡಲು ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಹಂಚಲಾಗಿದೆ” ಎಂದು ತಿಳಿಸಿದರು.

ಈ ಕರಾವಳಿ ಭಾಗದಲ್ಲಿ ನೂತನ ಪ್ರವಾಸೋದ್ಯಮ ನೀತಿ ರೂಪಿಸಬೇಕು ಎಂದು ಸಚಿವರಾದ ಹೆಚ್.ಕೆ ಪಾಟೀಲ್ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ತಿಳಿಸಿದ್ದೇವೆ. ನೂತನ ಪ್ರವಾಸೋದ್ಯಮ ನೀತಿಯಲ್ಲಿ ಮಂಗಳೂರಿನಿಂದ ಕಾರವಾರದವರೆಗೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಲಹೆಗಳನ್ನು ಪಡೆದಿದ್ದೇವೆ. ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಗಳಿಲ್ಲ. ಈ ಬಗ್ಗೆಯೂ ಗಮನ ಹರಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನಮ್ಮ ಕಾರ್ಯಕ್ರಮ ಜಾರಿ ಮಾಡುತ್ತೇವೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಯಕ್ರಮ ರೂಪಿಸಲಾಗುವುದು. ಇಲ್ಲಿನ ಬಂದರುಗಳ ಅಭಿವೃದ್ಧಿ ಮಾಡಲಾಗುವುದು. ಕರಾವಳಿ ಭಾಗ ನಮ್ಮ ರಾಜ್ಯದ ಶಕ್ತಿ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.

WhatsApp Group Join Now
Telegram Group Join Now
Share This Article