ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ: ಸಚಿವ ಬೈರತಿ ಸುರೇಶ್ ಹೊಸ ಬಾಂಬ್

Ravi Talawar
ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ: ಸಚಿವ ಬೈರತಿ ಸುರೇಶ್ ಹೊಸ ಬಾಂಬ್
WhatsApp Group Join Now
Telegram Group Join Now

ಕೋಲಾರ, ಏಪ್ರಿಲ್ 18: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಪ್ರಚಾರ ಭರ್ಜರಿಯಾಗಿ ನಡೀತಿದ್ರೆ, ಸಿಎಂ ತವರು ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮತ್ತೊಂದು ಹಂತಕ್ಕೆ ತಲುಪಿದೆ. ಮೈಸೂರು-ಚಾಮರಾಜನಗರದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ 9 ದಿನ ಪ್ರಚಾರ ಮಾಡಿದ್ದಾರೆ.

ಇದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿ ಈ ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಇಲ್ಲವಾದಲ್ಲಿ ಸಿಎಂ ಕುರ್ಚಿ ಕಂಟಕ ಇದೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸಿದ್ದರಾಮಯ್ಯನವರ ಶಿಷ್ಯ, ಸಚಿವ ಬೈರತಿ ಸುರೇಶ್​ ಸಹ  ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್​ನಲ್ಲಿ ಬಾರೀ ಸಂಚಲನಕ್ಕೆ ಕಾರಣವಾಗಿದೆ.

ಇಂದು (ಏಪ್ರಿಲ್ 18) ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್​​ ಪಕ್ಷದ ಮೇಲಿರಲಿ, ಸಿದ್ದರಾಮಯ್ಯನವರ ಮೇಲಿರಲಿ, ಹಾಗೇ ಅಭ್ಯರ್ಥಿ ಗೌತಮ್​ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article