ಉಡುಪಿ, ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ನನ್ನು (45) ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವುರು ದೂರು ನೀಡಿದ್ದರು. ಕೃಷ್ಣಶೆಟ್ಟಿ ಅವರ ದೂರು ಆಧರಿಸಿ ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ನ್ಯಾಯಾಲಯ ಕೃಷ್ಣ ನಾಯಕ್ ಅವರ ಜಾಮೀನು ತಿರಸ್ಕರಿಸಿತ್ತು. ಜಾಮೀನು ತಿರಸ್ಕಾರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದರು. ಇದೀಗ, ಕಾರ್ಕಳ ಠಾಣೆ ಪೊಲೀಸರು ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಬಂಧಿಸಿದ್ದಾರೆ.
ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪ್ರತಿಮೆಯನ್ನು ನಿರ್ಮಿಸಿದ್ದ ಆರೋಪ ಕೇಳಿ ಬಂದಿದೆ. ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಸಿಐಡಿ ತನಿಖೆ ನಡೆಸುತ್ತಿದೆ. ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದರು.