35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಅನುಮೋದನೆ

Ravi Talawar
35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಅನುಮೋದನೆ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 14: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇತ್ತೀಚೆಗೆ ಅನುಮೋದನೆ ನೀಡಿದೆ. ರಾಜ್ಯದ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿ ಬಹಳ ಸಮಯದಿಂದ ಬಾಕಿ ಉಳಿದಿತ್ತು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದರೂ, 2024-25 ಕ್ಕೆ ಈ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ.

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿ ಇಲ್ಲಿಯವರೆಗೆ ಭರದಿಂದ ಸಾಗಿದೆ. ನೇಮಕ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದಲ್ಲಿ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿಕೊಳ್ಳುವಂತೆ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ಹೆಚ್ಚಾಗಿ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಅನ್ನು ನಿಭಾಯಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವುದರಿಂದ ಆ ವಿಷಯಗಳ ಶಿಕ್ಷಕರನ್ನೇ ಹೆಚ್ಚು ನೇಮಕ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿ ಬಿಬಿ ಕಾವೇರಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್​ನಲ್ಲಿ ವಿದ್ಯಾರ್ಥಿಗಳು ಕಡಿಮೆ ಸಾಧನೆ ಮಾಡುವುದು ಕಂಡುಬಂದಿದೆ. ಈ ವಿಷಯಗಳಲ್ಲೇ ಹೆಚ್ಚಿನ ವೈಫಲ್ಯಗಳನ್ನು ಕಾಣುತ್ತಿದ್ದೇವೆ. ಹೀಗಾಗಿ ಈ ವಿಷಯಗಳ ಶಿಕ್ಷಕರ ನೇಮಕಕ್ಕೆ ಒತ್ತು ನೀಡಲು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ವಿಷಯಗಳ ಖಾಲಿ ಹುದ್ದೆಗಳು ತಾಲೂಕಿನಿಂದ ತಾಲೂಕಿಗೆ ಬದಲಾಗುತ್ತವೆ ಮತ್ತು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು (ಡಿಡಿಪಿಐಗಳು) ನೇಮಕಾತಿಗೆ ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.
WhatsApp Group Join Now
Telegram Group Join Now
Share This Article