ಎಸ್​ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ

Ravi Talawar
ಎಸ್​ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 25: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.

WhatsApp Group Join Now
Telegram Group Join Now
Share This Article